ನೆಲ್ಯಾಡಿ ಆಲ್ ಬದ್ರಿಯಾ ವಿದ್ಯಾಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

0

ನೆಲ್ಯಾಡಿ: ಆಲ್ ಬದ್ರಿಯಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ನೆಲ್ಯಾಡಿ ಇದರ ವಾರ್ಷಿಕ ಕ್ರೀಡಾಕೂಟ ಡಿ.17ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.
ವಿದ್ಯಾಸಂಸ್ಥೆಯ ಅಧ್ಯಕ್ಷ ನಾಝಿಮ್ ಸಾಹೇಬ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನೆಲ್ಯಾಡಿ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು ಕ್ರೀಡಾಕೂಟ ಉ ದ್ಘಾಟಿಸಿ ಮಾತನಾಡಿ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಮತ್ತು ಶಿಸ್ತು ಬೆಳೆಸುತ್ತದೆ. ಇಂತಹ ಕ್ರೀಡಾಕೂಟಗಳು ಮಕ್ಕಳ ಭವಿಷ್ಯ ರೂಪಿಸುವ ಶಕ್ತಿಶಾಲಿ ವೇದಿಕೆಗಳಾಗಿವೆ ಎಂದರು.


ನೆಲ್ಯಾಡಿ ಬದ್ರಿಯಾ ಜುಮ್ಮಾ ಮಸೀದಿಯ ಅಧ್ಯಕ್ಷ ಎನ್.ಎಸ್. ಸುಲೈಮಾನ್ ಅಧ್ಯಕ್ಷತೆ ವಹಿಸಿದ್ದರು. ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಸಲಾಂ ಬಿಲಾಲ್, ಸದಸ್ಯ ಜಯಾನಂದ ಬಂಟ್ರಿಯಾಲ್, ನೆಲ್ಯಾಡಿ ಪೊಲೀಸ್ ಹೊರಠಾಣೆ ಹೆಡ್‌ಕಾನ್‌ಸ್ಟೇಬಲ್ ಪ್ರಮೀಣ್, ಕೌಕ್ರಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಎಂ.ಕೆ. ಇಬ್ರಾಹಿಂ ಶುಭ ಹಾರೈಸಿದರು. ನೆಲ್ಯಾಡಿ ಗ್ರಾ.ಪಂ. ಸದಸ್ಯರಾದ ಮಹಮ್ಮದ್ ಇಕ್ಬಾಲ್, ಅಬ್ದುಲ್ ಜಬ್ಬಾರ್, ಕೌಕ್ರಾಡಿ ಗ್ರಾ.ಪಂ.ಸದಸ್ಯ ಹನೀಫ್ ಕರಾವಳಿ, ನೆಲ್ಯಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ, ನೆಲ್ಯಾಡಿ ಬದ್ರಿಯಾ ಜುಮ್ಮಾ ಮಸೀದಿ ಕಾರ್ಯದರ್ಶಿ ಇಲ್ಯಾಸ್ ಶಾಂತಿಬೆಟ್ಟು, ಕೋಲ್ಪೆ ಬದ್ರಿಯ ಜುಮ್ಮಾ ಮಸೀದಿ ಅಧ್ಯಕ್ಷ ಶುಕೂರ್ ಕೆಜಿಎನ್, ನೆಲ್ಯಾಡಿ ಎಸ್‌ಡಿಪಿಐ ಅಧ್ಯಕ್ಷ ಸಿದ್ದಿಕ್ ಎನ್., ಇಸ್ಮಾಯಿಲ್ ಕೆ., ರಫೀಕ್ ಅಲಂಪಾಡಿ, ಸಿದ್ದೀಕ್ ಮಣ್ಣಗುಂಡಿ, ಆಸೀಫ್ ಮುಹೀನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಫೀಕ್ ಪ್ರಿಯದರ್ಶಿನಿ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಮುಖ್ಯಶಿಕ್ಷಕಿ ಸೀಮಾ ಡೈನೀಸ್ ಸ್ವಾಗತಿಸಿದರು. ಸಹನೀಯಾ ವಂದಿಸಿದರು. ಫಾಯೀಝ ನಿರೂಪಿಸಿದರು. ನೆಲ್ಯಾಡಿ ಬದ್ರಿಯಾ ಜುಮ್ಮಾ ಮಸೀದಿಯ ಧರ್ಮಗುರು ಇಬ್ರಾಹಿಂ ಸಖಾಫಿ ಹಾಗೂ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ನಡೆಯಿತು.

LEAVE A REPLY

Please enter your comment!
Please enter your name here