






ಪುತ್ತೂರು : ಬೆಳ್ಳಿಪ್ಪಾಡಿ ಗ್ರಾಮದ ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ಡಿ. 21 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಾಯಿತು.



ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ, ಆಶಾ ಕಾರ್ಯಕರ್ತೆ ಮಮತಾ, ಅಡುಗೆ ಸಹಾಯಕಿ ಮೀನಾಕ್ಷಿ, ಸ್ತ್ರೀ ಶಕ್ತಿ ಒಕ್ಕೂಟದ ಯಮುನಾ ನಾಗಪ್ಪ, ಪದ್ಮಾ, ನಮಿತಾ ಭಾಸ್ಕರ್, ಶಿವರಾಮ, ಅಬ್ದುಲ್ ಹಮೀದ್ ಶಾಂತಿನಗರ ಹಾಗೂ ಶಾಲಾ ಮಕ್ಕಳ ಪೋಷಕರು ಉಪಸ್ಥಿತರಿದ್ದರು.










