ಪಾಣಾಜೆ ಸೂರಂಬೈಲು ಶಾಲಾ ವಾರ್ಷಿಕೋತ್ಸವ- ಸಂಭ್ರಮ- 2025 ಉದ್ಘಾಟನೆ

0

ನಿಡ್ಪಳ್ಳಿ: ಪಾಣಾಜೆ ಗ್ರಾಮದ ಸೂರಂಬೈಲು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಚೇತನ ಹಿರಿಯ ವಿದ್ಯಾರ್ಥಿ ಸಂಘ ಇದರ ಆಶ್ರಯದಲ್ಲಿ ಶಾಲಾ ವಾರ್ಷಿಕೋತ್ಸವ ಸಂಭ್ರಮ- 2025 ನೆನಪುಗಳ ಬೆಸುಗೆ ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ಧ್ವಜಾರೋಹಣ ನೆರವೇರಿಸಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶ್ರೀನಿವಾಸ ಪ್ರಸಾದ್ ಸೂರ್ಯಂಬೈಲು ಧ್ವಜಾರೋಹಣ ನೆರವೇರಿಸಿದರು.ಉದ್ಯಮಿ ಜಯರಾಮ ಭಟ್ ಬೆಂಗಳೂರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಗುರು ಊರ್ಮಿಳಾ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.ನಂತರ ಛದ್ಮವೇಷ ಸ್ಪರ್ಧೆ ಹಾಗೂ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ನೆನಪುಗಳ ಮೆರವಣಿಗೆ ಕಾರ್ಯಕ್ರಮ ನಡೆಯಿತು.ವಿವಿಧ  ಕಾರ್ಯಕ್ರಮ ಸಂಜೆಯವರೆಗೆ ನಡೆಯಲಿದೆ.

LEAVE A REPLY

Please enter your comment!
Please enter your name here