ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯಂತೆ ಸಭಾಭವನ, ಅಯ್ಯಪ್ಪ, ನಾಗ, ನವಗ್ರಹ ಗುಡಿಗಳ ತೆರವಿಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ – ಪ್ರಾರ್ಥನೆ ನೆರವೇರಿಸಿದ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ

0

ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಸಭಾಭವನ, ಅಯ್ಯಪ್ಪಗುಡಿ, ನಾಗನಗುಡಿ ಹಾಗೂ ನವಗ್ರಹ ಗುಡಿಗಳ ತೆರವುಗೊಳಿಸುವ ಬಗ್ಗೆ ಡಿ.29 ರಂದು ಬೆಳಗ್ಗೆ ಧನುಪೂಜೆಯ ಬಳಿಕ‌ ಶ್ರೀ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here