






ರಾಮಕುಂಜ: ರಾಮಕುಂಜ ಗ್ರಾ.ಪಂ.ಸಭಾಂಗಣದಲ್ಲಿ ಡಿ.30ರಂದು ವಿಕಲಚೇತನರ ವಿಶೇಷ ಗ್ರಾಮಸಭೆ ನಡೆಯಿತು.


ಗ್ರಾ.ಪಂ.ಅಧ್ಯಕ್ಷೆ ಸುಚೇತಾ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪೆರಾಬೆ ಗ್ರಾ.ಪಂ.ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಬಿ. ಮುತ್ತಪ್ಪ ಗೌಡರವರು ವಿಕಲಚೇತನ ಇಲಾಖೆಯಿಂದ ನೀಡುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.



ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್‌ಕುಮಾರ್ ಜಿ. ಹಾಗೂ ಗ್ರಾ. ಪಂ.ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಗುರುಗಳು, ವಿಶೇಷ ಚೇತನರು, ವಿಶೇಷ ಚೇತನರ ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಸಿಹೆಚ್‌ಒ, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳು, ಗ್ರಾಮಸ್ಥರು, ಶಾಲಾ ಮಕ್ಕಳು ಸಭೆಯಲ್ಲಿ ಉಪಸ್ಥಿತರಿದ್ದರು. ಗ್ರಾ.ಪಂ.ಕಾರ್ಯದರ್ಶಿ ಲಲಿತಾ ಜೆ.ಡಿ. ವಂದಿಸಿದರು. ಸಿಬ್ಬಂದಿಗಳು ಸಹಕರಿಸಿದರು.










