ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ

0

ನೆಲ್ಯಾಡಿ: ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಡಿ.30ರಂದು ಕುಂಟುಕುಡೇಲು ರಾಘವ ತಂತ್ರಿಗಳ ಪೌರೋಹಿತ್ಯದಲ್ಲಿ ನಡೆಯಿತು.


ಬೆಳಗ್ಗೆ ನಿತ್ಯ ಪೂಜೆ, ಪ್ರಾರ್ಥನೆ, ಗಣಹೋಮ, ಸಾನಿಧ್ಯ ಕಳಶ, ಪ್ರಾಯಶ್ಚಿತ್ತ ಹೋಮ, ಪ್ರಾಯಶ್ಚಿತ್ತ ಕಲಶಾಭಿಷೇಕ, ಸಾನಿಧ್ಯಕಲಶಾಭಿಷೇಕ, ಸಾನಿಧ್ಯ ಹೋಮ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಜನಾ ಕಾರ್ಯಕ್ರಮ, ಶ್ರೀ ದುರ್ಗಾಪೂಜೆ ಬಳಿಕ ಮಹಾರಂಗಪೂಜೆ, ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ರವಿಚಂದ್ರ ಹೊಸವಕ್ಲು, ಉಪಾಧ್ಯಕ್ಷ ರಘುನಾಥ ಕೆ. ಪದ್ಮಾರ್ಪಿತ, ಪ್ರಧಾನ ಕಾರ್ಯದರ್ಶಿ ರಾಕೇಶ್ ಎಸ್., ಕೋಶಾಧಿಕಾರಿ ಸುಧೀರ್ ಕುಮಾರ್ ಕೆ.ಎಸ್., ಜೊತೆ ಕಾರ್ಯದರ್ಶಿ ರಮೇಶ್ ಬಾಣಜಾಲು, ಪ್ರಧಾನ ಅರ್ಚಕ ಶ್ರೀಧರ ನೂಜಿನ್ನಾಯ, ಸಹ ಅರ್ಚಕ ಅಶ್ವಥ್ ನಾರಾಯಣ ತೋಡ್ತಿಲ್ಲಾಯ, ಗೌರವ ಸಲಹೆಗಾರದ ಡಾ.ಸದಾನಂದ ಕುಂದರ್, ಶಿವದಾಸನ್ ಮತ್ತು ಆಡಳಿತ ಮಂಡಳಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here