ನಾಳೆ ಜ.2ಕ್ಕೆ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಚಿಣ್ಣರೋತ್ಸವ

0


ಪುತ್ತೂರು: ಬನ್ನೂರಿನ ಕೃಷ್ಣನಗರ ಸಮೀಪದ ಅಲುಂಬಡುದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಶಾಲಾ ವಾರ್ಷಿಕ ಕಾರ್ಯಕ್ರಮವಾಗಿ ‘ಚಿಣ್ಣರೋತ್ಸವ’ ಜ.2ರಂದು ಶಾಲಾ ವಠಾರದಲ್ಲಿ ನಡೆಯಲಿದೆ.

ಬೆಳಿಗ್ಗೆ ಗಂಟೆ 11ಕ್ಕೆ ನಡೆಯುವ ಸಭಾಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ವಾರ್ಷಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ್ ಜಿಎಸ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಗಾಂಧಾರಿ ವಿದ್ಯೆಯ ಮೂಲಕ ಬುಕ್ ಆಫ್ ಏಷ್ಯನ್ ವರ್ಲ್ಡ್ ರೆಕಾರ್ಡ್ ಮಾಡಿದ ಸಾಧಕಿ ಶಮಿಕಾ ಎಮ್.ಕೆ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಗುವುದು.

ಸಂಸ್ಥೆಯ ಸಂಚಾಲಕ ಎವಿ.ನಾರಾಯ, ನಿರ್ದೇಶಕಿ ಗೌರಿ ಬನ್ನೂರು ಗೌರವ ಉಪಸ್ಥಿತಿಯಲ್ಲಿರುತ್ತಾರೆ. ಸಭಾ ಕಾರ್ಯಕ್ರಮದ ಆರಂಭದಲ್ಲಿ ಬೆಳಗ್ಗೆ ಗಂಟೆ 9.30ಕ್ಕೆ ಸಂಸ್ಥೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನದ ಬಳಿಕ 3 ಗಂಟೆಯಿಂದ ಎವಿಜಿ ಶಾಲಾ ಪುಟಾಣಿಗಳಿಂದ ಬಾಲಕೃಷ್ಣ ಪೂಜಾರಿ ಉಡ್ಡಂಗಳ ಅವರ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ ‘ಗುರುದಕ್ಷಿಣೆ’ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

LEAVE A REPLY

Please enter your comment!
Please enter your name here