






ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜುವೆಲರ್ಸ್ ಸಂಸ್ಥೆಯು ಪುತ್ತೂರು, ಮೂಡುಬಿದಿರೆ, ಸುಳ್ಯ, ಹಾಸನ ಮತ್ತು ಕುಶಾಲನಗರದಲ್ಲಿರುವ ತನ್ನ ಶಾಖೆಗಳಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವದ ಪ್ರಯುಕ್ತ ಗ್ರಾಹಕರಿಗೆ ಗ್ಲೋ ಫೆಸ್ಟ್ ಅನ್ನು ಡಿ.15ರಿಂದ ಆಯೋಜಿಸಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ಆಫರ್ ಜ.15 ರವರೆಗೆ ನಡೆಯಲಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.












