






ಸುಳ್ಯದ ವೈದ್ಯ ದಂಪತಿಗೆ ಶ್ರೀ ರಾಮಜಾಲು ಗರಡಿ ಗೌರವ ಪ್ರಶಸ್ತಿ ಪ್ರದಾನ


ಪುತ್ತೂರು: ಜಲ ಭಾಗ್ಯ, ಸಂತಾನ ಭಾಗ್ಯ ಸೇರಿದಂತೆ ಗೃಹ ಭಾಗ್ಯ ಇತ್ಯಾದಿಗಳಿಗೆ ಪ್ರಸಿದ್ಧಿ ಪಡೆದುಕೊಂಡಿರುವ ಒಳಮೊಗ್ರು ಗ್ರಾಮದ ಪರ್ಪುಂಜ ರಾಮಜಾಲುನಲ್ಲಿರು ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವವು ಜ.03 ರಂದು ನಡೆಯಲಿದ್ದು ಇದೇ ಸಂದರ್ಭದಲ್ಲಿ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸುಳ್ಯದ ವೈದ್ಯ ದಂಪತಿಗಳಾದ ಪ್ರಕೃತಿ ಚಿಕಿತ್ಸೆ, ಯೋಗ ಚಿಕಿತ್ಸೆ, ಆಕ್ಯುಪಂಕ್ಚರ್ ವೈದ್ಯರಾಗಿರುವ ಡಾ| ಶಶಿಧರ ಹಾಸನಡ್ಕ ಮತ್ತು ಆಯುರ್ವೇದ ವೈದ್ಯೆಯಾಗಿರುವ ಡಾ| ಅನುಪಮಾ ಹಾಸನಡ್ಕರವರಿಗೆ ಶ್ರೀ ರಾಮಜಾಲು ಗರಡಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರು ಪ್ರಶಸ್ತಿ ಪ್ರದಾನ ಮಾಡಲಿದ್ದು ಸುಬ್ರಹ್ಮಣ್ಯ ಸ್ವಾಮೀಜಿ ಶ್ರೀ ವಿದ್ಯಾಪ್ರಸನ್ನ ತೀರ್ಥರು ಆಶೀರ್ವಚನ ನೀಡಲಿದ್ದಾರೆ. ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.




ಶ್ರೀ ಬ್ರಹ್ಮಬೈದರ್ಕಳ ಜಾತ್ರೋತ್ಸವದಲ್ಲಿ ವಿಶೇಷವಾಗಿ ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯರಾತ್ರಿ ಸಂಸಾರ ಕಲಾವಿದರು ಪುತ್ತೂರು ಅಭಿನಯಿಸುವ ‘ನಂಬಿಕೆದಾಯೆ’ ತುಳುನಾಟಕ ಪ್ರದರ್ಶನಗೊಳ್ಳಲಿದೆ. ಪ್ರತಿ ವರ್ಷದಂತೆ ಈ ವರ್ಷವೂ 10 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು ಗರಡಿ ಸೇರಿದಂತೆ ಪರ್ಪುಂಜ ಪೇಟೆಯನ್ನು ಬಂಟಿಗ್ಸ್, ಪ್ಲಕ್ಸ್ ಹಾಗೇ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಗರಡಿಯ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










