ಪುತ್ತೂರು ತೋಟಗಾರಿಕೆ ನಿರ್ದೇಶಕರ ಕಛೇರಿಯಲ್ಲಿ ಜೇನು ಕೃಷಿ ನಿರ್ವಹಣಾ ತರಬೇತಿ

0

ಪುತ್ತೂರು: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯ ಜೇನು ಸಾಕಾಣಿಕೆ ಕಾರ್ಯಕ್ರಮದಡಿ ಒಂದು ದಿನದ ಜೇನು ಕೃಷಿ ನಿರ್ವಹಣಾ ತರಬೇತಿ ಕಾರ್ಯಕ್ರಮ ಜ.7ರಂದು ಪುತ್ತೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಈಶ್ವರಮಂಗಲ ಪಂಚಲಿಂಗೇಶ್ವರ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಸರ್ವೋತ್ತಮ ಬೋರ್ಕರ್ ಅವರು ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು.

ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ರೇಖಾ ಅವರು ಮಾತನಾಡಿ, ಜೇನುಕೃಷಿಯಲ್ಲಿ ಬರುವ ಸಮಸ್ಯೆಗೆ ಪರಿಹಾರ ಹಾಗೂ ತಾಂತ್ರೀಕತೆ ಅಳವಡಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಸಂಪನ್ಮೂಲ ವ್ಯಕ್ತಿ ಸುಳ್ಯ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ವೀರಪ್ಪ ಗೌಡ ಅವರು ತರಬೇತಿ ನೀಡಿದರು. ತೋಟಗಾರಿಕೆ ಇಲಾಖೆಯ ತಾಂತ್ರಿಕ ಸಹಾಯಕ ಶಿವಪ್ರಕಾಶ್ ಅವರು ಸ್ವಾಗತಿಸಿ,ವಂದಿಸಿದರು.

LEAVE A REPLY

Please enter your comment!
Please enter your name here