






ಪುತ್ತೂರು: ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜ.9ರಂದು ನಡೆದ ಜಿಲ್ಲಾಮಟ್ಟದ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆ 10ನೇ ತರಗತಿ ವಿದ್ಯಾರ್ಥಿ ನಿಕ್ಷೇತ್ ಕುಮಾರ್ ಉತ್ತಮ ಪ್ರದರ್ಶನ ನೀಡಿ ಅವಳಿ ಪದಕಗಳನ್ನು ಪಡೆದುಕೊಂಡಿರುತ್ತಾರೆ.


ಕ್ರೀಡಾಕೂಟದ ಉದ್ದ ಜಿಗಿತದಲ್ಲಿ ದ್ವಿತೀಯ ಮತ್ತು 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಮುಖ್ಯ ಶಿಕ್ಷಕ ವಿಜಯಕುಮಾರ್ ಎಂ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ ಕೆ ವಿ ತರಬೇತಿ ನೀಡಿರುತ್ತಾರೆ. ಇರ್ದೆ ಗ್ರಾಮದ ದೂಮಡ್ಕ ಕಟೀಲ್ತಡ್ಕ ನಿವಾಸಿ ಈಶ್ವರ ನಾಯ್ಕ ಮತ್ತು ಲೀಲಾವತಿ ದಂಪತಿ ಪುತ್ರ.













