ಜ.13: ಕಕ್ಕೂರು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

0

ನಿಡ್ಪಳ್ಳಿ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಹಾಗೂ ಬೆಟ್ಟಂಪಾಡಿ ಗ್ರಾಮ ಪಂಚಾಯತ್, ಕಕ್ಕೂರು ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ ಜ.13ರಂದು ಜರಗಲಿದೆ.


ಬೆಳಿಗ್ಗೆ ಗಂಟೆ 9ರಿಂದ ನಡೆಯಲಿರುವ ಸಭಾಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ ಅಧ್ಯಕ್ಷತೆ ವಹಿಸಲಿರುವರು. ಪಂಚಾಯತ್ ಉಪಾಧ್ಯಕ್ಷ ಮಹೇಶ್ ಕೊರ್ಮಂಡ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳಾ ಖಾಲೆ, ಪಂಚಾಯತ್ ಸದಸ್ಯರಾದ ಮೊಯಿದುಕುಂಞ, ಮಹಾಲಿಂಗ ನಾಯ್ಕ, ಸುಮಲತಾ, ಲಲಿತಾ ಚಿದಾನಂದ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೌಮ್ಯ ಎಂ.ಎಸ್, ಕಕ್ಕೂರು ಪ್ರಾಥಮಿಕ ಶಾಲಾ ಮುಖ್ಯಗುರು ಜ್ಯೋತಿ, ಮುಂಡೂರು ಪ್ರಾ.ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ, ಅನುತ್ತಮ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಪ್ತಗಿರಿ ಕೂವೆಂಜ ಇದರ ಬಾಲಸುಬ್ರಹ್ಮಣ್ಯ ಭಟ್ ಎ.ಎಸ್, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿವೃತ್ತ ಉಪ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಿಂಗಪ್ಪ ಗೌಡ, ಬಾಲವಿಕಾಸ ಸಮಿತಿ ಅಧ್ಯಕ್ಷೆ ರವಿಕಲಾ ಇವರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಅಂಗನವಾಡಿ ಕಾರ್ಯಕರ್ತೆ ಶ್ಯಾಮಲ ರೆಂಜ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here