






ಕಾಣಿಯೂರು: ಚಾರ್ವಾಕ ಕೊರಿಯಾನ ಬ್ರಹ್ಮ ಬೈದರ್ಕಳ ಗರಡಿ ಹಾಗೂ ಪರಿವಾರ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯವು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರದ ವತಿಯಿಂದ ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಲಾಯಿತು.



ಈ ಸಂದರ್ಭದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಧನಸಹಾಯಕ್ಕೆ ಮನವಿ ಮಾಡಲಾಯಿತು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ಸೊರಕೆ, ಟ್ರಸ್ಟಿನ ಗೌರವಾಧ್ಯಕ್ಷ ಮೋಹನ್ ಗೌಡ ಬಾರೆಂಗಳ, ಸೇವ ಟ್ರಸ್ಟಿನ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಟ್ರಸ್ಟಿನ ಉಪಾಧ್ಯಕ್ಷ ವಸಂತ ದಲಾರಿ, ಟ್ರಸ್ಟಿನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಸ್ವಯಂ ಸೇವಕ ಸಮಿತಿ ಅಧ್ಯಕ್ಷ ನಂದನ್ ಕಜೆ, ಹಾಗೂ ಗೋಪಾಲಕೃಷ್ಣ ಅಭಿಕಾರ, ಯತಿರಾಜ್ ಕಲಾಯಿ ಉಪಸ್ಥಿತರಿದ್ದರು.












