






ಪುತ್ತೂರು: ಪರ್ಲಡ್ಕ ಶಿವಪೇಟೆ ವಿವೇಕಾನಂದ ಶಿಶುಮಂದಿರದಲ್ಲಿ ದ್ವಿತೀಯ ಪಾಲಕರ ಸಭೆ ಜ.10 ರಂದು ನಡೆಯಿತು.



ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಶ ಬೈಪದವುರವರು ಪಾಲಕರನ್ನು ಉದ್ದೇಶಿಸಿ ಮಗುವಿನ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ವದ್ದು. ಮಕ್ಕಳನ್ನು ಬದಲಾಯಿಸುವ ಮೊದಲು ಪಾಲಕರು ತಮ್ಮನ್ನು ತಾವು ಮೊದಲು ಬದಲಾಯಿಸಿಕೊಳ್ಳಬೇಕು. ಮಗುವಿನ ಜೊತೆಗೆ ಮಗುವಾಗಬೇಕು. ಅವರ ಭಾವನೆಗಳಿಗೆ ಪ್ರತಿಕ್ರಿಯಿಸಬೇಕು ಎಂದು ತಿಳಿಸಿದರು. ಜೊತೆಗೆ ಮೊಬೈಲ್ ಬಳಕೆಯಿಂದ ಮಕ್ಕಳನ್ನು ದೂರವಿರಿಸಬೇಕು. ಅದರ ಬದಲಿಗೆ ವಿವಿಧ ರೀತಿಯ ಪುಸ್ತಕಗಳನ್ನು ಕೊಡಬೇಕು. ವಿಮರ್ಶಾತ್ಮಕ ಚಿಂತನೆ ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಮ್ಮನ್ನು ತಾವು ತೊಡಗಿಕೊಳ್ಳುವಂತೆ ಮಾಡಬೇಕು. ಅಲ್ಲದೇ ಮಕ್ಕಳ ಜೊತೆಗೆ ಹೆಚ್ಚಾಗಿ ಮಾತನಾಡಬೇಕು ಎಂಬುದಾಗಿ ವಿವರವಾಗಿ ತಿಳಿಸಿದರು.



ಕಾರ್ಯಕ್ರಮವು ಪಾಲಕರಿಗೆ ಮಹತ್ವದಾಯಕ ಮಾರ್ಗದರ್ಶನವನ್ನು, ಮಕ್ಕಳ ಬಗೆಗಿನ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಒದಗಿಸಿತು. ಕಾರ್ಯಕ್ರಮದಲ್ಲಿ ಮಕ್ಕಳು ಪ್ರಾರ್ಥಿಸಿ, ಶಿಕ್ಷಕಿ ಪದ್ಮಪ್ರಿಯ ಕಾರ್ಯಕ್ರಮ ನಿರೂಪಿಸಿದರು. ಶಿಶುಮಂದಿರದ ಅಧ್ಯಕ್ಷ ರಾಜಗೋಪಾಲ್ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಆಡಳಿತ ಮಂಡಳಿಯ ಕೋಶಾಧಿಕಾರಿ ಚಂದ್ರಪ್ರಭಾ ವಂದಿಸಿದರು. ಕಾರ್ಯಕ್ರಮದಲ್ಲಿ ಮಾತಾಜಿ, ಪಾಲಕರು ಹಾಗೂ ಶಿಶುಮಂದಿರದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.










