







ನೆಲ್ಯಾಡಿ; ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಪಟ್ಟೆ ನಿವಾಸಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ(67ವ.)ಅವರು ಜ.14ರಂದು ಮುಂಜಾನೆ ನಿಧನರಾದರು.


ಕಳೆದ ಹಲವು ಸಮಯದಿಂದ ಅನಾರೋಗ್ಯ ಬಳಲುತ್ತಿದ್ದ ಉಮೇಶ್ ಶೆಟ್ಟಿಯವರಿಗೆ ಕಳೆದ ರಾತ್ರಿ ಏಕಾಏಕಿ ಅನಾರೋಗ್ಯ ಕಾಣಿಸಿಕೊಂಡಿದ್ದು ನೆಲ್ಯಾಡಿ ಅಶ್ವಿನಿ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ತಡರಾತ್ರಿ 1 ಗಂಟೆ ವೇಳೆಗೆ ಮೃತಪಟ್ಟರೆಂದು ವರದಿಯಾಗಿದೆ. ಉಮೇಶ್ ಶೆಟ್ಟಿ ಅವರು ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಿರಂತರ 30 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಇವರ ಅವಧಿಯಲ್ಲಿ ಸಂಘವು ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿರುತ್ತದೆ. ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತರಾಗಿರುವ ಇವರು ನೆಲ್ಯಾಡಿ ಗ್ರಾಮ ಪಂಚಾಯತಿನ ಮಾಜಿ ಸದಸ್ಯರು ಹಾಗೂ ಪಡುಬೆಟ್ಟು ಸರಕಾರಿ ಶಾಲೆಯ ಶಾಲಾ ಅಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷರಾಗಿದ್ದರು. ಹೀಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.



ಮಧ್ಯಾಹ್ನ ಅಂತ್ಯ ಸಂಸ್ಕಾರ;
ಮೃತ ಉಮೇಶ್ ಶೆಟ್ಟಿಯವರ ಅಂತ್ಯಕ್ರಿಯೆ ಇಂದು (ಜ.14)ಮಧ್ಯಾಹ್ನ 1 ಗಂಟೆಗೆ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸಂಘಕ್ಕೆ ರಜೆ,
ಮೃತರ ಗೌರವಾರ್ಥ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜ.14ರಂದು ರಜೆ ಘೋಷಿಸಲಾಗಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈಯವರು ತಿಳಿಸಿದ್ದಾರೆ.










