






ನರಿಮೊಗರು: ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಜ.13ರಂದು ನಡೆಯಿತು. ರಾಷ್ಟ್ರೀಯ ಜೆ.ಸಿ ತರಬೇತುದಾರ ವೇಣುಗೋಪಾಲ್.ಎಸ್ ಜೆ ಇವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಅನೇಕ ಚಟುವಟಿಕೆಗಳನ್ನು ನೀಡುವುದರ ಮೂಲಕ ಪರೀಕ್ಷೆಗಳನ್ನು ಎದುರಿಸುವ ಬಗ್ಗೆ ಮಾಹಿತಿಯನ್ನು ನೀಡಿದರು.


ಈ ಕಾರ್ಯಕ್ರಮದಲ್ಲಿ ಶಾಲಾ ಕಾರ್ಯದರ್ಶಿಯಾದ ಕೃಷ್ಣ ಪ್ರಸಾದ್ ಕೆದಿಲಾಯ, ಕೋಶಾಧಿಕಾರಿ ಹರೀಶ್ ಪುತ್ತೂರಾಯ ಹಾಗೂ ಶಾಲಾ ಮುಖ್ಯಗುರು ಪ್ರಸನ್ನ ಕೆ ಉಪಸ್ಥಿತರಿದ್ದರು.
















