






ಕಡಬ: ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಉದ್ಯಮಿ ಅಶೋಕ್ ಕುಮಾರ್ ರೈ ವಜ್ರಪಾಣಿ ಅವರು ಹೃದಯಾಘಾತದಿಂದ ಜ.19ರಂದು ನಿಧನ ಹೊಂದಿದ್ದಾರೆ.


ಅಶೋಕ್ ಕುಮಾರ್ ರೈಯವರು ಅಸ್ವಸ್ಥಗೊಂಡು ಮನೆಯಲ್ಲಿ ಕುಸಿದು ಬಿದ್ದಿದ್ದು ಬಳಿಕ ಅವರನ್ನು ಕಡಬದ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಆ ವೇಳೆಗೆ ಮೃತಪಟ್ಟಿದ್ದಾರೆ. ಮೃತರು ಕಡಬ ಪರಿಸರದಲ್ಲಿ ನ್ಯಾಚುರಲ್ ವಾಟರ್ ನ ವಿತರಕರಾಗಿದ್ದು, ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿದ್ದು, ಕಡಬ ಯಕ್ಷ ಗೆಳೆಯರ ಬಳಗದ ಗೌರವಾಧ್ಯಕ್ಷರಾಗಿ, ಒಡಿಯೂರು ವಿವಿದ್ದೋದ್ದೇಶ ಸಹಕಾರಿ ಸಂಘದ ಕಡಬ ಶಾಖಾ ಸಲಹಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹಲವಾರು ಸಾಮಾಜಿಕ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದಾರೆ.



ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.










