ಇರ್ದೆ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಪೂರ್ವಸಿದ್ದತಾ ಸಭೆ

0

ಪುತ್ತೂರು: ಇರ್ದೆ ಶ್ರೀವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರ, ಪೂಮಾಣಿ, ಕಿನ್ನಿಮಾಣಿ ಮತ್ತು ರಾಜನ್ ದೈವಗಳ ಕದಿಕೆ ಚಾವಡಿಯಲ್ಲಿ ಫೆ.1ರಿಂದ 6ರ ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪೂರ್ವಸಿದ್ದತಾ ಸಭೆಯು ಜ.೧೮ರಂದು ದೇವಸ್ಥಾನದಲ್ಲಿ ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವಕ್ಕೆ ಸಂಬಂಧಿಸಿದ ಪೂರ್ವ ಸಿದ್ದತೆಗಳ ಬಗ್ಗೆ ಚರ್ಚಿಸಿ, ಜಾತ್ರಾ ಮಹೋತ್ಸವದ ವಿವಿಧ ಜವಾಬ್ದಾರಿಗಳನ್ನು ಹಂಚಲಾಯಿತು. ಕಾರ್ಯಕ್ರಮದ ಯಶಸ್ಸಿಗೆಗೆ ಶಿವಾಜಿ ಯುವ ಸೇನೆ, ಭಗತ್ ಸಿಂಗ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘ, ಒಡಿಯೂರು ಸಂಘ, ಸಮರ್ಪಣ ಸೇವಾ ಟ್ರಸ್ಟ್, ವಿಷ್ಣು ಮಹಿಳಾ ಮಂಡಲ, ವಿಷ್ಣು ಯುವಕ ಮಂಡಲ, ವಿಷ್ಣು ಸಿಂಗಾರಿ ಮೇಳ, ಶಾರದೋತ್ಸವ ಸಮಿತಿ ಸಹಕಾರ ಪಡೆಯುವುದಾಗಿ ತೀರ್ಮಾನಿಸಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸದಸ್ಯರು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here