






ಪುತ್ತೂರು:ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ 2026 ಏಪ್ರಿಲ್ 9 ರಿಂದ 12ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಮಾಹಿತಿ ಬಗ್ಗೆ ಸಮಾಲೋಚನೆ ಸಭೆ ಜ.24ರಂದು ಬೆ.10ಕ್ಕೆ ಹನುಮಗಿರಿ ವೈದೇಹಿ ಸಭಾಭವನದಲ್ಲಿ ನಡೆಯಲಿದೆ.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಹಿಸಲಿದ್ದಾರೆ. ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳು ಮಾರ್ಗದರ್ಶನ ನೀಡಲಿದ್ದಾರೆ.
ಈ ಸಭೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಬ್ರಹ್ಮಕಲಶೋತ್ಸವ ಗ್ರಾಮ ಸಮಿತಿಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಸಮಿತಿಯ ಸಂಚಾಲಕರು, ಸಹಸಂಚಾಲಕರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದೆ.













