






ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಸಾಧಕ


ಪುತ್ತೂರು: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರು ರಾಜ್ಯಮಟ್ಟದ ಯುವ ಸಾಧಕರಿಗೆ ನೀಡುವ ವಾರ್ಷಿಕ ಪ್ರಶಸ್ತಿಗೆ ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ, ಕ್ರೀಡಾ ಸಾಧಕ ವಿಜೇತ್ ಕುಮಾರ್ ಅವರು ಆಯ್ಕೆಯಾಗಿರುತ್ತಾರೆ.



ಕ್ರೀಡಾ ಕ್ಷೇತ್ರದಲ್ಲಿ ವೈಯಕ್ತಿಕ ಮತ್ತು ಸಾಮುದಾಯಿಕ ಸಾಧನೆ ಮಾಡಿದವರಿಗೆ ನೀಡುವ 2025-26 ನೇ ಸಾಲಿನ ರಾಜ್ಯಮಟ್ಟದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಏಕೈಕ ಸಾಧಕ ಇವರಾಗಿರುತ್ತಾರೆ. ವಿಜೇತ್ ಕುಮಾರ್ ಅವರು ಡಾಡ್ಜ್ ಬಾಲ್ ತಂಡದ ಅಂತರಾಷ್ಟ್ರೀಯ ತರಬೇತುದಾರಾಗಿದ್ದು ಇವರು ಪ್ರಸ್ತುತ ದಿ ಇಂಡಿಯನ್ ಡಾಡ್ಜ್ ಬಾಲ್ ಫೆಡರೇಶನ್ ರೆಫ್ರಿಬೋರ್ಡ್ ಚೇರ್ಮನ್ ಆಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಿಂಗಾಪುರ, ಮಲೇಶಿಯಾಗಳಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಡಾಡ್ಜ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ತರಬೇತುದಾರರಾಗಿ ಎರಡು ಬಾರಿ ಭಾಗವಹಿಸಿರುತ್ತಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಜ.27ರಂದು ಬೆಳಗಾವಿಯ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.










