







ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಡಬ ತಾಲೂಕು(ರಿ), ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಕಡಬ ಘಟಕದ ಸಹಯೋಗದೊಂದಿಗೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವಾರ್ಷಿಕೋತ್ಸವ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮವು ಕಡಬದ ಅಮೃತ ಸರೋವರದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ವಲಯದ ಅಧ್ಯಕ್ಷರಾದ ಕರುಣಾಕರ ಗೋಗಟೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಭವಾನಿ ಶಂಕರ್ ವಹಿಸಿದರು. ಕಡಬ ತಾಲೂಕಿನ ಆರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಗೆ ಬ್ಯಾಗ್ ವಿತರಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್ ಮಾತನಾಡಿ ಶ್ರೀ ಕ್ಷೇತ್ರದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಮಾಜಮುಖಿ ಹಲವಾರು ಕಾರ್ಯಕ್ರಮಗಳನ್ನು ಸೃಷ್ಟಿಸಿದ್ದಾರೆ. ಅವರ ಕಲ್ಪನೆಯಲ್ಲಿ ಮೂಡಿಬಂದ ಸ್ಥಳೀಯ ಮಟ್ಟದಲ್ಲಿ ಸರಕಾರದ ವ್ಯವಸ್ಥೆಯೊಂದಿಗೆ ಹೊಂದಿಕೊಂಡು ವಿಪತ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಪೂರಕವಾಗಿ ಹಮ್ಮಿಕೊಂಡ ವಿನೂತನ ಕಾರ್ಯಕ್ರಮವೇ ಶೌರ್ಯ ವಿಪತ್ತು ನಿರ್ವಹಣಾ ಘಟಕ ಈ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸೇವಾಮನೋಭಾವನೆಗಳೊಂದಿಗೆ ಹಲವಾರು ಸಾಮಾಜಿಕ ವಿಪತ್ತು ಸೇವೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ ಎಂದರು.




ಕಾರ್ಯಕ್ರಮದಲ್ಲಿ ಉಪಅರಣ್ಯಅಧಿಕಾರಿ ಚಿದಾನಂದ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಕಾರ್ಯವನ್ನು ಶ್ಲಾಘಿಸಿ ತಮ್ಮ ಇಲಾಖೆಯಿಂದ ಕೈಲಾದಷ್ಟು ಸಹಕಾರ ನೀಡುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ನೆಲ್ಯಾಡಿ ವಲಯದ ಉಪ ಅರಣ್ಯ ಅಧಿಕಾರಿಗಳಾದ ಸುಬ್ರಹ್ಮಣ್ಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾ ಸದಸ್ಯರಾದ ಶಿವಪ್ರಸಾದ್ ಮೈಲೇರಿ, ಕುಟ್ರುಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮನ, ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಆನಂದ್ ಗೌಡ ಎ, ಕಡಬ ವಲಯ ಒಕ್ಕೂಟ ಅಧ್ಯಕ್ಷರಾದ ರಮೇಶ್ ರೈ ಅರ್ಪಜೆ ಸಾಂದರ್ಭಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಡಬ ಒಕ್ಕೂಟದ ಅಧ್ಯಕ್ಷರಾದ ನಳಿನಿ ರೈ, ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀಶ ಬಂಗೇರ, ಮೋಹನ್ ಕೆರೆಕ್ಕೋಡಿ, ಕಡಬ ವಲಯದ ಭಜನಾ ಪರಿಷತ್ ಅಧ್ಯಕ್ಷರಾದ ರಮೇಶ್ ಅಡಿಲು, ಜನಜಾಗೃತಿ ವೇದಿಕೆಯ ಸದಸ್ಯರುಗಳು, ಒಕ್ಕೂಟ ಅಧ್ಯಕ್ಷರುಗಳು ಸಂಘದ ಸದಸ್ಯರು, ಜ್ಞಾನವಿಕಾಸ ಸಮನ್ವಯಾಧಿಕಾರಿ,ಕಡಬ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಸದಸ್ಯರು, ಸೇವಾಪ್ರತಿನಿಧಿಗಳು ಇತರರು ಉಪಸ್ಥಿತರಿದ್ದರು.
ಕಡಬ ತಾಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಲಯ ಮೇಲ್ವಿಚಾರಕರಾದ ವಿಜೇಶ್ ಜೈನ್ ವಂದಿಸಿದರು. ಮೇಲ್ವಿಚಾರಕರಾದ ರವಿಪ್ರಸಾದ್ ಕಾರ್ಯಕ್ರಮವನ್ನು ನಿರೂಪಿಸಿ, ಸೇವಾಪ್ರತಿನಿಧಿ ನಳಿನಿ ಕಾರ್ಯಕ್ರಮವನ್ನು ನಿರ್ವಹಿಸಿದರು.









