ಪಾಣಾಜೆ ಸುಬೋಧ ಪ್ರೌಢಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

0

ಪಾಣಾಜೆ: ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2025-26ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ.100 ಫಲಿತಾಂಶ  ಲಭಿಸಿರುತ್ತದೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ 10 ವಿದ್ಯಾರ್ಥಿಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. ಉಳಿದ ಎಂಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಚೈತನ್ಯ ಎಸ್ ಹಾಗೂ ಯಧುರಾಜ್ ಎಸ್ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಎಂದು ಶಾಲಾ ಸಂಚಾಲಕ ಗಿಳಿಯಾಲು ಮಹಾಬಲೇಶ್ವರ ಭಟ್ ತಿಳಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕಿ ಶಾರದಾ ಮಾರ್ಗದರ್ಶನ ನೀಡಿರುತ್ತಾರೆ.

LEAVE A REPLY

Please enter your comment!
Please enter your name here