ಬೊಳುವಾರು ಕ್ಷೇತ್ರದ ನೇಮೋತ್ಸವ ಸಮಾಪ್ತಿ

0

ಪುತ್ತೂರು: ಬೊಳುವಾರು ಶ್ರೀ ದುರ್ಗಾ ಪರಮೇಶ್ವರಿ ಉಳ್ಳಾಳ್ತಿ ಮಲರಾಯ ಸಪರಿವಾರ ಕ್ಷೇತ್ರದಲ್ಲಿ 10ನೇ ವರ್ಷದ ವಾರ್ಷಿಕೋತ್ಸವ, ನೇಮೋತ್ಸವ 25ರಂದು ಸಂಪನ್ನಗೊಂಡಿತು.


ಜ.24ರಂದು ರಾತ್ರಿ ಮಲರಾಯ ಮತ್ತು ಸಪರಿವಾರ ದೈವಗಳ ಭಂಡಾರ ತೆಗೆದು ರಕ್ತೇಶ್ವರಿ, ಕಲ್ಕುಡ, ಕಲ್ಲುರ್ಟಿ ಹಾಗೂ ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು. ಜ.25ರಂದು ಬೆಳಿಗ್ಗೆ ರಾಜನ್ ದೈವ ಮಲರಾಯ ನೇಮ, ಸಿರಿಮುಡಿ ಗಂಧಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ಅನ್ನಸಂಪರ್ತಣೆ ನಡೆದು, ಗುಳಿಗ ದೈವದ ನೇಮ ಜರಗಿತು. 2 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಸುಮಾರು 5000ಕ್ಕೂ ಮಿಕ್ಕಿ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು.


ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ತಾಲೂಕು ಪಂಚಾಯತ್ ಸಿಇಒ ನವೀನ್ ಭಂಡಾರಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯ ವಿನಯ್ ಸುವರ್ಣ, ಬ್ಯಾಂಕ್ ಆಫ್ ಬರೋಡಾದ ಡೆಪ್ಯೂಟಿ ರೀಜನಲ್ ಮ್ಯಾನೇಜರ್ ಅಮಿತ್ ಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ತಾ.ಪಂ. ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ವಿಭಾಗ ಸಹಪ್ರಭಾರ ಗೋಪಾಲಕೃಷ್ಣ ಹೇರಳೆ ಮತ್ತಿತರರು ನೇಮೋತ್ಸವದಲ್ಲಿ ಪಾಲ್ಗೊಂಡಿದ್ದರು.

ಕರಸೇವಕರ ಕಾರ್ಯಕ್ಕೆ ಭಕ್ತರಿಂದ ಶ್ಲಾಘನೆ:
ಕ್ಷೇತ್ರದಲ್ಲಿ ವಾರ್ಷಿಕೋತ್ಸವ, ನೇಮೋತ್ಸವ ಯಶಸ್ಸಿಗಾಗಿ ಕಳೆದ ಒಂದು ತಿಂಗಳಿನಿಂದ ಶ್ರೀ ದುರ್ಗಾ ಪರಮೇಶ್ವರೀ ಉಳ್ಳಾಳ್ತಿ ಕ್ಷೇತ್ರದ ಸುಮಾರು 20-30 ಮಂದಿಯ ತಂಡ ನಿತ್ಯಕರಸೇವೆ ಮೂಲಕ ತಮ್ಮನ್ನು ತಾವು ತೊಡಗಿಸಿ, ಪ್ರಚಾರ, ಚಪ್ಪರ ಸೇವೆ ಮತ್ತು ಧಾರ್ಮಿಕ ಕಾರ್ಯಕ್ಕೆ ಸಹಕರಿಸಿರುವ ಕುರಿತು ಆಗಮಿಸಿದ ಭಕ್ತರು ಶ್ಲಾಘನೆ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಕಿಶೋರ್‌ಕುಮಾರ್ ಬೊಟ್ಯಾಡಿ ಭೇಟಿ: ನೇಮೋತ್ಸವಕ್ಕೆ ವಿಧಾನ ಪರಿಷತ್ ಸದಸ್ಯ ಕಿಶೋರ್‌ಕುಮಾರ್ ಬೊಟ್ಯಾಡಿ ಜ.25ರಂದು ಭೇಟಿ ನೀಡಿ ನೇಮೋತ್ಸವದಲ್ಲಿ ಪಾಲ್ಗೊಂಡರು. ದೇವರ ಸನ್ನಿಧಿಯಲ್ಲಿ ಅವರನ್ನು ಗೌರವಿಸಲಾಯಿತು.

LEAVE A REPLY

Please enter your comment!
Please enter your name here