ಕಾಣಿಯೂರು ಶಾಲೆಯಲ್ಲಿ ಗಣರಾಜ್ಯೋತ್ಸವ

0

ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್ ಡಿ ಎಂ ಸಿ ಯ ಉಪಾಧ್ಯಕ್ಷೆ ಯಶೋಧ ನೇರೋಳ್ತಡ್ಕ ನೆರವೇರಿಸಿ ಶುಭ ಹಾರೈಸಿದರು. ಬೆಳಂದೂರು ಗ್ರಾಮ ಪಂಚಾಯತ್ ಸದಸ್ಯೆ ಗೌರಿ ಮಾದೋಡಿ ಮಾತನಾಡಿ, ನಮ್ಮ ದೇಶ ಪ್ರಪಂಚದಲ್ಲೇ ದೊಡ್ಡ ಪ್ರಜಾಪ್ರಭುತ್ವ ದೇಶ ಮತ್ತು ಇಡೀ ವಿಶ್ವಕ್ಕೆ ಮಾದರಿಯಾದ ದೇಶ. ನಾವೆಲ್ಲರೂ ಅದನ್ನು ಉಳಿಸಿಕೊಂಡು ಹೋಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ. ಸಿ ಸದಸ್ಯರಾದ ರಮೇಶ್ ಮಾದೋಡಿ, ಯಶಕಲಾ ಮುಗರಂಜ, ಚಂದ್ರಶೇಖರ ಬೈತಡ್ಕ, ದಿನೇಶ ಅನ್ಯಾಡಿ, ಪೋಷಕರಾದ ಕೇಶವ ನಾರ್ಯಬೈಲುರವರು ಪ್ರಜಾಪ್ರಭುತ್ವದ ಬಗ್ಗೆ ಮಾಹಿತಿಗಳನ್ನು ನೀಡಿದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here