






ಸವಣೂರು: ಸವಣೂರು ಗ್ರಾ.ಪಂ.ವ್ಯಾಪ್ತಿಯ ಸವಣೂರು, ಪಾಲ್ತಾಡಿ, ಪುಣ್ಚಪ್ಪಾಡಿ ಗ್ರಾಮಗಳ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಜ.27ರಂದು ಗ್ರಾಮ ಪಂಚಾಯತ್ ನ ಕುಮಾರಧಾರ ಸಭಾಂಗಣದಲ್ಲಿ ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಮಾರ್ಗದರ್ಶಿ ಅಧಿಕಾರಿಯಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪಾಲ್ಗೊಳ್ಳಲಿದ್ದಾರೆ.



ಗ್ರಾಮಸ್ಥರು ಗ್ರಾಮ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಮಾಭಿವೃದ್ಧಿಗೆ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾ.ಪಂ.ನ ಪ್ರಕಟಣೆ ತಿಳಿಸಿದೆ.









