ಇಚ್ಲಂಪಾಡಿ ನೇರ್ಲ ಶಾಲೆಯಲ್ಲಿ ಗಣರಾಜ್ಯೋತ್ಸವ

0

ನೆಲ್ಯಾಡಿ: ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ನೇರ್ಲ-ಇಚ್ಲಂಪಾಡಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.


ಎಸ್‌ಡಿಎಂಸಿ ಅಧ್ಯಕ್ಷ ವಸಂತ ಬಿಜೇರು ಧ್ವಜಾರೋಹಣ ನೆರವೇರಿಸಿದರು. ಎಸ್‌ಡಿಎಂಸಿ ಸದಸ್ಯರಾದ ಸತೀಶ್ ಪಳಿಕೆ, ನಿತ್ಯಾನಂದ ಉಮೆಸಾಗು, ಶಾಲಾ ಮುಖ್ಯ ಶಿಕ್ಷಕ ಡಾ.ಗಿರೀಶ್, ಶಿಕ್ಷಕರು, ಅಕ್ಷರ ದಾಸೋಹ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಮಕ್ಕಳು ಗಣರಾಜ್ಯೋತ್ಸವದ ಕುರಿತಾಗಿ ಭಾಷಣವನ್ನು ಮಾಡಿದರು. ಶಿಕ್ಷಕಿ ಸೌಮ್ಯ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here