ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವ

0

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ನೆರವೇರಿಸಿ ಮಾತನಾಡಿ, ಗಣರಾಜ್ಯೋತ್ಸವ ದಿನದ ಮಹತ್ವವನ್ನು ಭಾರತೀಯ ಪ್ರಜೆಗಳಾದ ನಾವೆಲ್ಲರೂ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದರು.

ಸಂಸ್ಥೆಯ ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಇವರು ಮಾತನಾಡಿ, ವಿದ್ಯಾರ್ಥಿಗಳಾದ ತಾವು ಮೂಲಭೂತ ಹಕ್ಕುಗಳನ್ನು ಚಲಾಯಿಸುತ್ತಾ ಮೂಲಭೂತ ಕರ್ತವ್ಯಗಳನ್ನು ಮರೆಯಬಾರದು ಎಂದು ತಿಳಿಸಿ ಸರ್ವರಿಗೂ ವಂದಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ,ಸಂಸ್ಥೆಯ ಸಹ ಆಡಳಿತಾಧಿಕಾರಿ ಹೇಮಾ ನಾಗೇಶ ರೈ ಮಾಳ , ಕನ್ನಡ ಮಾಧ್ಯಮದ ಮುಖ್ಯಗುರು ವಿನಯ .ವಿ. ಶೆಟ್ಟಿ , ಎಲ್ಲಾ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.ನಂತರ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಸಹಕರಿಸಿದರು.

LEAVE A REPLY

Please enter your comment!
Please enter your name here