ದಿ| ಉಮೇಶ್ ಶೆಟ್ಟಿ ಮೂಡಂಬೈಲ್‌ಗುತ್ತುರವರ ಉತ್ತರಕ್ರಿಯೆ, ಶ್ರದ್ಧಾಂಜಲಿ ಸಭೆ

0

ನೆಲ್ಯಾಡಿ; ಜ.13ರಂದು ನಿಧನರಾದ ನೆಲ್ಯಾಡಿ ಗ್ರಾಮದ ಪಟ್ಟೆ ನಿವಾಸಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಪಟ್ಟೆ ಅವರ ಉತ್ತರಕ್ರಿಯೆ ಹಾಗೂ ಶ್ರದ್ಧಾಂಜಲಿ ಸಭೆ ಜ.26ರಂದು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.


ಸುಧಾಕರ ಉಪ್ಪಿನಂಗಡಿ ಅವರು ನುಡಿನಮನ ಸಲ್ಲಿಸಿ, ಉಮೇಶ್ ಶೆಟ್ಟಿ ಅವರು 30ವರ್ಷ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಘವನ್ನು ಜನಸ್ನೇಹಿಯಾಗಿ ರೂಪಿಸಿದ್ದಾರೆ. ಒಂದಷ್ಟು ಮಂದಿಯ ಬದುಕಿಗೆ ದಾರಿ ತೋರಿಸಿ ಆದರ್ಶಪ್ರಾಯರಾಗಿದ್ದಾರೆ. ಸಂಘಟನೆ ಮೂಲಕ ಗುರುತಿಸಿಕೊಂಡಿದ್ದ ಅವರು ನೆಲ್ಯಾಡಿಯಂತಹ ಊರಿನಲ್ಲಿ ಪಕ್ಷವನ್ನು ಬಲಗೊಳಿಸಿದ್ದಾರೆ. ಅಗಲಿದ ಅವರ ಆತ್ಮಕ್ಕೆ ಭಗವಂತನು ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.


ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಕೆ.ಎಂ., ಸಂಘದ ನಿರ್ದೇಶಕರು, ಸಿಬ್ಬಂದಿಗಳ, ವಿವಿಧ ಸಂಘಟನೆಗಳ ಪ್ರಮುಖರ ಸಹಿತ ಹಲವು ಮಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಉಮೇಶ್ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು. ಮೃತರ ಪುತ್ರ ಸಂದೀಪ್, ಸೊಸೆ ಪವಿತ್ರ, ಪುತ್ರಿಯರಾದ ಸೌಜನ್ಯ, ಸಂಧ್ಯಾ, ಅಳಿಯಂದಿರು, ಮೊಮ್ಮಕ್ಕಳು, ಸಹೋದರರು, ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here