







ರಾಮಕುಂಜ: ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿರುವ ಎಂಡೋಪಾಲನಾ ಕೇಂದ್ರಕ್ಕೆ ಲಯನ್ಸ್ ಕ್ಲಬ್ ರೀಜನಲ್ ಚಯರ್ಪರ್ಸನ್ ಆನಂದ ರೈ ಅವರು ಜ.27ರಂದು ಭೇಟಿ ನೀಡಿ ಎಂಡೋಪಾಲನಾ ಕೇಂದ್ರದಲ್ಲಿರುವ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.



ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಮಕ್ಕಳಿಗೆ ಮಧ್ಯಾಹ್ನದ ಊಟ ಹಾಗೂ ಹಣ್ಣುಹಂಪಲು ವಿತರಣೆ ಮಾಡಲಾಯಿತು. ಆಲಂಕಾರು ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ಅಧ್ಯಕ್ಷ ಪದ್ಮಪ್ಪ ಗೌಡ ರಾಮಕುಂಜ, ಕೋಶಾಧಿಕಾರಿ ಇಂದುಶೇಖರ ಶೆಟ್ಟಿ ಕುಕ್ಕೇರಿ, ಸದಸ್ಯ ಸುಭಾಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.













