






ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.ಸಂಸ್ಥೆಯ ಅಧ್ಯಕ್ಷ ಅಶ್ರಫ್ ಶಾ ಮಾಂತೂರ್ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.



ಸಂಸ್ಥೆಯ ಕಾರ್ಯದರ್ಶಿ ಬಶೀರ್ ಹಾಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಸ್ಥೆಯ ಪ್ರಾಂಶುಪಾಲ ರಂಝೀ ಮುಹಮ್ಮದ್ ಹಾಗೂ ಶಿಕ್ಷಕಿ ತೇಜಸ್ವಿನಿ ಗಣರಾಜ್ಯೋತ್ಸವ ದಿನಾಚರಣೆಯ ಸಂದೇಶವನ್ನು ನೀಡಿದರು.
ವಿದ್ಯಾರ್ಥಿಗಳಿಗೆ ವ್ಯಾಪಾರ ಜ್ಞಾನ ನೀಡುವ ಉದ್ದೇಶದಿಂದ ಹಮ್ಮಿಕೊಂಡ ಝೆಸ್ಟೋರ ವಿದ್ಯಾರ್ಥಿಗಳ ಫುಡ್ ಫೆಸ್ಟ್ ಕಾರ್ಯಕ್ರಮವನ್ನು ಕೇರಳದ ರಾಜ್ಯ ವ್ಯಾಪಾರಿ ಸಂಘದ ಸದಸ್ಯರಾದ ಮುಹಮ್ಮದ್ ಹಾಜಿ ಉದ್ಘಾಟಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳು ವಿವಿಧ ಬಗೆಯ ರುಚಿಕರವಾದ ತಿಂಡಿ ತಿನಿಸುಗಳನ್ನು ತಯಾರಿಸಿದರು.



ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು ಮತ್ತು ಎಲ್ಲ ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕಿ ಕು. ಲಾವಣ್ಯ ಅವರು ಝೆಸ್ಟೋರ ಕಾರ್ಯಕ್ರಮದ ಸಂಚಾಲಕರಾಗಿ ಕಾರ್ಯನಿರ್ವಹಿಸಿದರು. ಶಿಕ್ಷಕಿ ಸವಿತಾ ಕುಮಾರಿ ಸ್ವಾಗತಿಸಿದರು. ಕು.ನಾದಿಯ ಕಾರ್ಯಕ್ರಮ ನಿರೂಪಿಸಿದರು. ಸಾಜಿದ ವಂದಿಸಿದರು.










