







ಪುತ್ತೂರು: ಪುತ್ತೂರು ನಗರಸಭೆಯ 2026-27 ನೇ ಸಾಲಿನ ಆಯವ್ಯಯ ತಯಾರಿಸುವ ಸಂಬಂಧ ಸಾರ್ವಜನಿಕವಾಗಿ ಸಮಾಲೋಚನೆ ಸಭೆಯು ಜ.30ರಂದು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಭವನದಲ್ಲಿ ಸಭೆ ಕರೆಯಲಾಗಿದೆ.


ನೋಂದಾಯಿತ ಸ್ಥಳೀಯ ಸಂಘ ಸಂಸ್ಥೆಗಳು, ನೋಂದಾಯಿತ ಸರ್ಕಾರೇತರ ಸಂಘ ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ಹಾಗೂ ಇತರೇ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ನಗರದ ಗಣ್ಯ ವ್ಯಕ್ತಿಗಳನ್ನು ಒಳಗೊಂಡಂತೆ “ಸಾರ್ವಜನಿಕ ಸಮಾಲೋಚನಾ ಸಭೆ” ನಡೆಯಲಿದೆ. ಸಭೆಯಲ್ಲಿ ಆಯವ್ಯಯ ತಯಾರಿಕೆಗೆ ನಗರಕ್ಕೆ ಅಗತ್ಯವೆನಿಸುವ ಯೋಜನೆಗಳು ಹಾಗೂ ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ತಮ್ಮ ಸಲಹೆ-ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಲು ಕೋರಿದೆ.













