






ಉಪ್ಪಿನಂಗಡಿ: ಶ್ರೀ ದುರ್ಗಾಪರಮೇಶ್ವರಿ ಸೇವಾ ಟ್ರಸ್ಟ್ ಹಾಗೂ ಪೆರಿಯಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ವತಿಯಿಂದ 49ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಪೆರಿಯಡ್ಕದ ಭಜನಾ ಮಂದಿರದ ವತಿಯಿಂದ ಜ.31ರಂದು ನಡೆಯಲಿದೆ.


ಸಂಜೆ 5ರಿಂದ ಪೂಜೆ ಆರಂಭಗೊಳ್ಳಲಿದ್ದು, 8ಕ್ಕೆ ಮಹಾಮಂಗಳಾರತಿ, ಪ್ರಸಾದ ವಿತರಣೆ, 8:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, 9ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. 9 ರಿಂದ ಅಮ್ಮ ಕಲಾವಿದೆರ್ ಕುಡ್ಲ ಇವರಿಂದ ‘ಆನ್ ಮಗೆ’ ತುಳು ಹಾಸ್ಯಮಯ ನಾಟಕ ನಡೆಯಲಿದೆ ಎಂದು ಭಜನಾ ಮಂದಿರದ ಅಧ್ಯಕ್ಷ ಪ್ರಸನ್ನ ಪೆರಿಯಡ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.












