






ಕಾಣಿಯೂರು: ಮಕ್ಕಳಿಗೆ ಆರ್ಥಿಕ, ವ್ಯವಹಾರಿಕ ಕೌಶಲ ಹೆಚ್ಚಿಸಲು ಮೆಟ್ರಿಕ್ ಮೇಳ ಆಯೋಜನೆ ಮಾಡಲಾಗುತ್ತಿದೆ. ಪೋಷಕ ಬಂಧುಗಳು ಶಿಕ್ಷಕರ ಜೊತೆ ಕೈಜೋಡಿಸಿದಾಗ ಶಾಲೆ ಉನ್ನತಿಯಾಗಲು ಸಾಧ್ಯ ಎಂದು
ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿಯವರು ಹೇಳಿದರು. ಅವರು ಕಾಣಿಯೂರು ಸ.ಹಿ.ಪ್ರಾ.ಶಾಲೆಯಲ್ಲಿ ಜ.31ರಂದು ನಡೆದ ಚಿಣ್ಣರ ಸಂತೆ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಯಮಿ ಧರ್ಣಪ್ಪ ಗೌಡ ಅಂಬುಲ ಮಾತನಾಡಿ, ಶಿಕ್ಷಣ ಸಂಸ್ಥೆಯ ಅಭಿವೃದ್ಧಿಯಲ್ಲಿ ಪೋಷಕರ ಮತ್ತು ಶಾಲಾಭಿಮಾನಿಗಳ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಶಾಲಾಭಿವೃದ್ಧಿಯಲ್ಲಿ ಎಲ್ಲರು ಕೈಜೋಡಿಸಬೇಕು ಎಂದರು.



ಕಾಣಿಯೂರು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಅನಿಲ ಅಧ್ಯಕ್ಷತೆ ವಹಿಸಿದ್ದರು. ಕಾಣಿಯೂರು ಶ್ರೀ ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್, ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯೆ ಗೌರಿ ಮಾದೋಡಿ, ಕಾಣಿಯೂರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮಯ್ಯ ಗೌಡ ಅನಿಲ, ಉದ್ಯಮಿ ಚಂದ್ರಶೇಖರ ಬರೆಪ್ಪಾಡಿ, ಪ್ರದೀಪ್ ಬೊಬ್ಬೆಕ್ಕೇರಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಅಶೋಕ್ ಗೌಡ, ಕಾಣಿಯೂರು ಯಕ್ಷಮಿತ್ರ ಬಳಗದ ಅಧ್ಯಕ್ಷ ಹರಿಪ್ರಸಾದ್ ರೈ, ಕಾಣಿಯೂರು ಜಾತ್ರೋತ್ಸವ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಮಾದೋಡಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಎಸ್ ಡಿಎಂಸಿ ಉಪಾಧ್ಯಕ್ಷೆ ಯಶೋಧ ನೇರೋಳ್ತಡ್ಕ, ಕಾಣಿಯೂರು ಕಣ್ವರ್ಷಿ ಮಹಿಳಾ ಮಂಡಲದ ಅಧ್ಯಕ್ಷೆ ಮಮತಾ ಅಗಳಿ, ಕಾಣಿಯೂರು ಕಣರ್ಷಿ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಗಣೇಶ್ ಬೆದ್ರಾಜೆ ಉಪಸ್ಥಿತರಿದ್ದರು. ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕರು ಸಹಕರಿಸಿದರು. ಶಾಲಾ ಮುಖ್ಯಶಿಕ್ಷಕ ಬಾಲಕೃಷ್ಣ ಕೆ ಸ್ವಾಗತಿಸಿ, ಅತಿಥಿ ಶಿಕ್ಷಕಿ ದಿವ್ಯಾ ವಂದಿಸಿದರು. ಶಿಕ್ಷಕಿ ವೀಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.












