






ಪುತ್ತೂರು:ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಕ್ರೀಡಾ ಇಲಾಖೆ ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಇತ್ತೀಚೆಗೆ ಜಿಲ್ಲಾ ಮಂಗಳಾ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆಯಿತು.


ಸರ್ಕಾರಿ ಪದವಿ ಪೂರ್ವ ಕಾಲೇಜು ಸವಣೂರು ಪ್ರೌಢಶಾಲಾ ವಿಭಾಗದಿಂದ ಶ್ರೀಮತಿ ರೀನಾ ಎಂ.ಡಿ. ಶ್ರೀಮತಿ ನಯನಾ ಜಿ ಪಾಲೇಕರ್. ಶ್ರೀಮತಿ ಪವಿತ್ರ ಉಡಪ ಇವರು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ಅತ್ಯುತ್ತಮ ನಿರ್ವಹಣೆಯನ್ನು ನೀಡಿ ದ.ಕ ಜಿಲ್ಲಾ ಮಟ್ಟದಲ್ಲಿ ಕಡಬ ತಾಲೂಕು ತಂಡ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಶ್ರೀಮತಿ ರೀನಾ ಎಂ.ಡಿ ವೈಯಕ್ತಿಕ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಶ್ರೀಮತಿ ನಯನ ಜಿ ಪಾಲೇಕರ್ ತ್ರೋಬಾಲ್ ಪಂದ್ಯಾಟದಲ್ಲಿಯೂ ಸತತ ಎರಡನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.













