






ಕಾಣಿಯೂರು: ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘ, ದ. ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಭಾರತೀಯ ಅಂಚೆ ಇಲಾಖೆ ಪೂತ್ತೂರು ಉಪ ವಿಭಾಗ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ಕಾಣಿಯೂರು ಗ್ರಾಮ ಪಂಚಾಯತ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಧಾರ್ ಕಾರ್ಡ್ ಪರಿಷ್ಕರಣೆ ಮತ್ತು ಹೊಸ ಆಧಾರ್ ಕಾರ್ಡ್ ನೋಂದಣಿ ಹಾಗೂ ಅಂಚೆ ಇಲಾಖೆಯ ಅಪಘಾತ ಮತ್ತು ಆರೋಗ್ಯ ವಿಮಾ ಯೋಜನೆ ಕಾರ್ಯಕ್ರಮವು ಫೆ.1,2ರಂದು ಚಾರ್ವಾಕ ಹಾಲು ಉತ್ಪಾದಕರ ಸಹಕಾರಿ ಸಂಘದ ಪ್ರಧಾನ ಕಚೇರಿ ಮುದುವದಲ್ಲಿ ಜರಗಿತು.


ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಅಂಚೆ ಇಲಾಖೆಯ ಪುತ್ತೂರು ಉಪ ವಿಭಾಗದ ಮೇಲ್ವಿಚಾರಕ ಆನಂದ ಅವರು ಆಧಾರ್ ಕಾರ್ಡಿನ ಮಹತ್ವ ಹಾಗೂ ಅಪಘಾತ ವಿಮೆಯ ಬಗ್ಗೆ ಜನರಿಗೆ ಸಮಗ್ರ ಮಾಹಿತಿ ನೀಡಿದರು.



ಕಾರ್ಯಕ್ರಮದಲ್ಲಿ ಕಾಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಶ್ವನಾಥ ಕೊಪ್ಪ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ ಉದನಡ್ಕ, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶೋಕ್ ಗೌಡ, ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಧನಂಜಯ ಕೇನಾಜೆ, ಸಂಘದ ಉಪಾಧ್ಯಕ್ಷ ಕುಸುಮಾಧರ ಇಡ್ಯಡ್ಕ ಹಾಗೂ ಸಂಘದ ನಿರ್ದೇಶಕರು, ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು ಸಂಘದ ಕಾರ್ಯದರ್ಶಿ ದಮಯಂತಿ ಮುದುವ, ಸ್ವಾಗತಿಸಿ, ನಿರ್ದೇಶಕ ಗೋಪಾಲಕೃಷ್ಣ ಬಾರೆಂಗಳ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.










