






ಪುತ್ತೂರು: ಆಧಾರ್ ಅಪ್ಡೇಟ್ ಮಾಡುವ ಉದ್ದೇಶದಿಂದ ಸಾರ್ವಜನಿಕರು ಪೋಸ್ಟ್ ಆಫೀಸ್‌ನಲ್ಲಿ ಬೆಳಿಗ್ಗಿನಿಂದ ಸಂಜೆಯವರೆಗೆ ಕಾದು ಕುಳಿತ ಘಟನೆ ಕಾವಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ.


ತಾಲೂಕಿನಲ್ಲಿ ಆಧಾರ್ ಅಪ್ಡೇಟ್ ಮಾಡುವ ಉದ್ದೇಶದಿಂದ ಸಾರ್ವಜನಿಕರು ಪೋಸ್ಟ್ ಆಫೀಸ್‌ನಲ್ಲಿ ಬೆಳಿಗ್ಗೆ 6 ಗಂಟೆಯಿಂದಲೇ ಕ್ಯೂನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಟೋಕನ್ ವಿತರಣೆಯನ್ನು ಬೆಳಿಗ್ಗೆ 9 ಗಂಟೆಗೆ ಆರಂಭಿಸಲಾಗುತ್ತಿದ್ದು, ಸರದಿ ಬರುವ ವೇಳೆಗೆ ಮಧ್ಯಾಹ್ನ ಕಳೆದಿರುತ್ತದೆ. ಇದರಿಂದ ವೃದ್ಧರು, ಮಹಿಳೆಯರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಉಂಟಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಸಮಧಾನ ವ್ಯಕ್ತವಾಗುತ್ತಿದೆ.



ಈ ಹಿಂದೆ ಇದ್ದಂತೆ ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಧಾರ್ ಅಪ್ಡೇಟ್ ಕೇಂದ್ರಗಳನ್ನು ತೆರೆಯುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.










