ನಾಳೆ(ಫೆ.06) ಕೆದಂಬಾಡಿ ಗ್ರಾಮಸಭೆ

0

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನ 2025-26 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆಯವರ ಅಧ್ಯಕ್ಷತೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರ ಮಾರ್ಗದರ್ಶನದಲ್ಲಿ ಫೆ.೦6 ರಂದು ಬೆಳಿಗ್ಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಗ್ರಾಮಸಭೆಗೆ ಗ್ರಾಮದ ಎಲ್ಲಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡುವ ಮೂಲಕ ಸರಕಾರದಿಂದ ದೊರೆಯುವ ಸವಲತ್ತುಗಳಿಗೆ ಅರ್ಜಿಗಳನ್ನು ಸಲ್ಲಿಸುವಂತೆ ಗ್ರಾಪಂ ಅಧ್ಯಕ್ಷೆ ಸುಜಾತ ಮುಳಿಗದ್ದೆ, ಉಪಾಧ್ಯಕ್ಷೆ ಜಯಲಕ್ಷ್ಮೀ ಬಲ್ಲಾಳ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲಾವಣ್ಯ ಪಿ, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಹಾಗೂ ಸರ್ವ ಸದಸ್ಯರುಗಳು, ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here