







ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಉರ್ಲಾಂಡಿಯಲ್ಲಿ ಸರಕು ಹೊತ್ತ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪೆ.5 ರ ತಡರಾತ್ರಿ ನಡೆದಿದೆ.



ತಮಿಳುನಾಡು ನೋಂದಾಣಿಯ ಸರಕು ಹೊತ್ತ ಲಾರಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆ ಹೋಗುತ್ತಿದ್ದು ಬೈಪಾಸ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆ ಬೇಲಿಗೆ ಡಿಕ್ಕಿಯಾಗಿ ಪಕ್ಕದ ವಿದ್ಯುತ್ ಕಂಬದ ಮೇಲೆ ಬಿದ್ದಿತ್ತು. ಅಪಘಾತದ ರಭಸಕ್ಕೆ ಲಾರಿಯಲ್ಲಿದ್ದ ಸರಕುಗಳು ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಬಿದ್ದಿತ್ತು. ರಾತ್ರೋ ರಾತ್ರಿ ಲಾರಿಯನ್ನು ರಸ್ತೆಯಿಂದ ತೆರವು ಮಾಡಿ ವಾಹನ ಸಂಚಾರಕ್ಕೆ ಸುಗಮಗೊಳಿಸಲಾಗಿದೆ.













