







ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿ- ಭಾಗೀರಥಿ ಮುರುಳ್ಯ


ಕಾಣಿಯೂರು: ಕುದ್ಮಾರು ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶೌಚಾಲಯ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಮಕ್ಕಳು ರಜೆಗೆ ಹೋಗುವ ಮುನ್ನವೇ ಸಂಸದರಿಂದ ಉದ್ಘಾಟನೆ ಆಗುವಂತೆ ಆಗಲಿ. ಈ ಕಾರ್ಯಕ್ಕೆ ಎಲ್ಲರೂ ಸಹಕರಿಸಿ ಒಟ್ಟಾಗಿ ಕೆಲಸ ಮಾಡುವಂತೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕುದ್ಮಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ ಎಂ ಆರ್ ಪಿ ಎಲ್ ಅವರ ಸಿ.ಎಸ್.ಆರ್ ಫಂಡ್ ನ ರೂ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಫೆ 7ರಂದು ಶೀಲಾನ್ಯಾಸ ನೆರವೇರಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಉಪಾಧ್ಯಕ್ಷ ಜಯಂತ ಅಬೀರ, ಸದಸ್ಯರಾದ ಲೋಹಿತಾಕ್ಷ ಕೆಡೆಂಜಿಕಟ್ಟ, ಗೀತಾ ಕುವೆತ್ತೋಡಿ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಲಳಂಬೆ,, ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮಾನವಳಿಕೆ, ಕಾರ್ಯದರ್ಶಿ ಶಿವಪ್ರಕಾಶ್ ದೊಡ್ಡ ತೋಟ, ಬಿಜೆಪಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಗಣೇಶ್ ಉದನಡ್ಕ, ಸುಳ್ಯ ಮಂಡಲ ಬಿಜೆಪಿ ಎಸ್.ಟಿ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಸವಣೂರು ಕ್ಲಸ್ಟರ್ ಸಿಆರ್ಪಿ ಜಯಂತ ವೈ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದೇವರಾಜ್ ನೂಜಿ ಹಾಗೂ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಶಾಲಾ ಮುಖ್ಯಗುರು ಮಿನಿ ವರ್ಗಿಸ್ ಸ್ವಾಗತಿಸಿ, ಲೋಕೇಶ್ ಬಿ.ಎನ್ ವಂದಿಸಿದರು.













