







ಪುತ್ತೂರು: ಮುಂಡೂರು ಗ್ರಾಮದ ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ಜಾತ್ರೋತ್ಸವ ಸಮಿತಿಗೆ ಮೂರು ಮಂದಿ ಸಂಚಾಲಕರನ್ನು ಆಯ್ಕೆ ಮಾಡಲಾಗಿದೆ.
ಜಾತ್ರೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ಮತ್ತು ಸಂಚಾಲಕರಾಗಿ ಸುಂದರ ಗೌಡ ನಡುಬೈಲು, ಗಂಗಾಧರ ಸುವರ್ಣ ನರಿಮೊಗರು ಹಾಗೂ ನೀಲಪ್ಪ ಪೂಜಾರಿ ಕುರೆಮಜಲು ಅವರನ್ನು ಆಯ್ಕೆ ಮಾಡಲಾಗಿದೆ. ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಜಾತ್ರೋತ್ಸವದ ಪೂರ್ವಬಾವಿ ಸಭೆಯಲ್ಲಿ ಸಂಚಾಲಕರನ್ನು ಆಯ್ಕೆ ಮಾಡಲಾಗಿದೆ.












