ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ :  ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯ ವಿದ್ಯಾರ್ಥಿಗಳಿಗೆ ಬಹುಮಾನ 

0

ಬಡಗನ್ನೂರು :  ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ (ರಿ) ಗುತ್ತಿಗಾರು ಇದರ ವತಿಯಿಂದ 5ನೇ ವರ್ಷಾಚರಣೆ ಪ್ರಯುಕ್ತ ಜೆಸಿಐ ಪಂಜ ಪಂಚಶ್ರೀ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ 14 ವಿದ್ಯಾರ್ಥಿಗಳು ಭಾಗವಹಿಸಿ, 9ನೇ ತರಗತಿಯ ಯಶ್ವಿತ್.ಕೆ. ದ್ವಿತೀಯ ಸ್ಥಾನವನ್ನು, ಹಾಗೂ 9ನೇ ತರಗತಿಯ ಆದಿತ್ಯ ಕೃಷ್ಣ ಎ ಇವರು ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ  ವಿದ್ಯಾರ್ಥಿಗಳಿಗೆ ಯೋಗ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದ್ದು, ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಬಹುಮಾನ ಪಡೆದಿರುತ್ತಾರೆ. 

LEAVE A REPLY

Please enter your comment!
Please enter your name here