ಶ್ರೀ ಕೃಷ್ಣ ವಿದ್ಯಾಸಂಸ್ಥೆಯ ಹತ್ತನೇ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ತರಬೇತಿ ಕಾರ್ಯಕ್ರಮ

0

ಬಡಗನ್ನೂರು : ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾಪೂರ್ವ ತಯಾರಿ ತರಬೇತಿ ಕಾರ್ಯಕ್ರಮ ಫೆ 9 ರಂದು ಶಾಲಾ ಆವರಣದಲ್ಲಿ ನಡೆಯಿತು.

 ಕಾರ್ಯಕ್ರಮವನ್ನು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ನಿರ್ದೇಶಕ  ಗಣರಾಜ ಕುಂಬ್ಳೆ ರವರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, 10ನೇ ತರಗತಿಯು ಜೀವನದಲ್ಲಿ ಅತ್ಯಂತ ಮುಖ್ಯವಾದ ಹಂತವಾಗಿದ್ದು, ಈ ತರಬೇತಿಯು ಮುಂದಿನ ಪರೀಕ್ಷೆಗೆ ಅಡಿಪಾಯವಾಗಲಿದೆ ಎಂದರು.

ಮಂಗಳೂರು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ  ಜಿ ಎಸ್ ಶಶಿಧರ್ , ಆನ್ ಲೈನ್ ಮುಖಾಂತರ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.ಉಪ್ಪಳಿಗೆ ಸರಕಾರಿ ಪ್ರೌಢಶಾಲಾ ನಿವೃತ್ತ ಮುಖ್ಯಗುರು  ನಾರಾಯಣ ಕೆ, ಪರೀಕ್ಷಾ ನೀಲನಕಾಶೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ. ಅಧ್ಯಕ್ಷ  ಲಿಂಗಪ್ಪಗೌಡ ಮೋಡಿಕೆ, ಸಂಚಾಲಕ  ವಿಘ್ನೇಶ್ ಹಿರಣ್ಯ, ಪ್ರೌಢಶಾಲಾ ಮುಖ್ಯ ಗುರು  ಸುಮನಾ ಬಿ  ಉಪಸ್ಥಿತರಿದ್ದರು.

 ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯಗುರು ಸುಮನಾ ಬಿ ವಂದಿಸಿದರು. ವಿಜ್ಞಾನ ಶಿಕ್ಷಕಿ ಭವಿತಾ ಪಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here