ಫೆ.11: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

0

ಕಾವು: ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಸೆಂಚುರಿ ಗ್ರೂಪ್ ಬೆಂಗಳೂರು, ಡಾ| ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್, ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್, ಅಬ್ಕೋ ಸ್ಟೀಲ್ ಪ್ರೈ. ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಫೆ.11ರಂದು ಬೆಳಿಗ್ಗೆ ಗಂಟೆ 9 ರಿಂದ ಮಧ್ಯಾಹ್ನ 1 ರವರೆಗೆ ಕಾವು ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ನಡೆಯಲಿದೆ.


ಶಿಬಿರದ ವಿಶೇಷತೆಗಳು:
ಶಿಬಿರದಲ್ಲಿ ಸಂಪೂರ್ಣ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ, ಅಗತ್ಯವುಳ್ಳವರಿಗೆ ಪ್ರಸಾದ್ ನೇತ್ರಾಲಯದಲ್ಲಿ ನಿಗದಿತ ದಿನಾಂಕದಂದು ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ಶಿಬಿರ ಸಾರ್ವಜನಿಕ ಸಂಪರ್ಕಾಧಿಕಾರಿ ಮನೋಹರ್‌ರವರು ತಿಳಿಸಿದ್ದಾರೆ.
ಸಹಕಾರ ಸಂಘದ ಸದಸ್ಯರುಗಳು, ಗ್ರಾಹಕರು ಮತ್ತು ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here