






ಪುತ್ತೂರು: ಮೆಸ್ಕಾಂನ ಪುತ್ತೂರು ಗ್ರಾಮಾಂತರ ಹಾಗೂ ನಗರ ಉಪವಿಭಾಗ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ಫೆ.12ರಂದು ಕುಂಬ್ರದಲ್ಲಿರುವ ಮೆಸ್ಕಾಂ ಪುತ್ತೂರು ಗ್ರಾಮಾಂತರ ಉಪವಿಭಾಗ ಕಚೇರಿಯಲ್ಲಿ ಮಂಗಳೂರಿನ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ.


ಮೆಸ್ಕಾಂಗೆ ಸಂಬಂಧಿಸಿದ ಅಹವಾಲುಗಳನ್ನು ಬಳಕೆದಾರರು ಖುದ್ದಾಗಿ ಅಥವಾ ದೂರವಾಣಿ ಮೂಲಕ ಸಲ್ಲಿಸಬಹುದಾಗಿದೆ. ದೂರವಾಣಿ ಮೂಲಕ ಅಹವಾಲುಗಳನ್ನು ಸಲ್ಲಿಸುವವರು 08251- 285393 ನಂಬರ್ಗೆ ಕರೆ ಮಾಡುವಂತೆ ಮೆಸ್ಕಾಂನ ಪ್ರಕಟಣೆ ತಿಳಿಸಿದೆ.












