ಫೆ.12, 13: ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ, ದೈವಗಳ ನೇಮೋತ್ಸವ

0

ಉಪ್ಪಿನಂಗಡಿ: ಬಜತ್ತೂರು ಗ್ರಾಮದ ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಶ್ರೀ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಗ್ರಾಮ ದೇವರಾದ ಕಾಂಚನ-ನಡ್ಪ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೆ ಹಾಗೂ ದೈವಗಳ ನೇಮೋತ್ಸವ ಫೆ.12 ಮತ್ತು 13ರಂದು ನಡೆಯಲಿದೆ.

ಫೆ.11ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ಫೆ.12ರಂದು ಬೆಳಿಗ್ಗೆ ಗಂಟೆ 8.45ಕ್ಕೆ ಗೊನೆ ಮುಹೂರ್ತ, 9.30ರಿಂದ ಬಜತ್ತೂರು, ಕಾಂಚನ, ಪದಕ ದೈವಗಳಿಗೆ ತಂಬಿಲ ಮತ್ತು ಬಜತ್ತೂರು ಗುತ್ತಿನ ನಾಗತಂಬಿಲ, 10.00ಕ್ಕೆ ತೋರಣ ಮುಹೂರ್ತ ನಡೆಯಲಿದೆ. ರಾತ್ರಿ 7.00ಕ್ಕೆ ಚಕ್ರವರ್ತಿ ಕೊಡಮಣಿತ್ತಾಯ ಮತ್ತು ಗ್ರಾಮ ದೈವವಾದ ಶಿರಾಡಿ ದೈವಗಳ ಭಂಡಾರ ತರುವುದು, ರಾತ್ರಿ 8.00ಕ್ಕೆ ಶ್ರೀ ದೇವರಿಗೆ ರಂಗಪೂಜೆ ಹಾಗೂ ಪಂಜುರ್ಲಿ ಮತ್ತು ಗ್ರಾಮ ದೈವಗಳಿಗೆ ಕೊಡಿನಾಡಿನಲ್ಲಿ ತಂಬಿಲ, ಪ್ರಸಾದ ವಿತರಣೆ, 8.30ಕ್ಕೆ ಶ್ರೀ ದೇವರ ಬಲಿ ಹೊರಡುವುದು, ಅಶ್ವತ್ಥ ಕಟ್ಟೆಪೂಜೆ, ಉತ್ಸವ, ವಸಂತ ಕಟ್ಟೆಪೂಜೆ, ನೃತ್ಯ ಬಲಿ, ರಾತ್ರಿ 9ಕ್ಕೆ ಅನ್ನಸಂತರ್ಪಣೆ ನಡೆಯಲಿದೆ.

ಫೆ.13ರಂದು ಬೆಳಿಗ್ಗೆ 8 ಕ್ಕೆ ಗಣಪತಿ ಹೋಮ, ಕಲಶಾಭಿಷೇಕ, ಅಪ್ಪಸೇವೆ(ಗಣಪತಿ ದೇವರಿಗೆ), 9 ರಿಂದ ಶ್ರೀ ದೇವರ ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪಂಜುರ್ಲಿ ದೈವಕ್ಕೆ ತಂಬಿಲ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ವರ್ಣರ ಪಂಜುರ್ಲಿ ದೈವಕ್ಕೆ ತಂಬಿಲ ಮತ್ತು ಭಂಡಾರ ತೆಗೆಯುವುದು, ದೇವರ ಪ್ರಸಾದ ವಿತರಣೆ ನಡೆಯಲಿದೆ.


ರಾತ್ರಿ 7 ರಿಂದ ಕಾಂಚನ ವೆಂಕಟ ಸುಬ್ರಹ್ಮಣ್ಯಂ ಸ್ಮಾರಕ ಪ್ರೌಢಶಾಲೆ ಹಾಗೂ ಶ್ರೀ ಲಕ್ಷ್ಮೀನಾರಾಯಣ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 7.30ರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ರಾತ್ರಿ 8.30ರಿಂದ ಮಾನ್ವಿ ಪೂಜಾರಿ ಮತ್ತು ಮೌಲ್ಯ ಪೂಜಾರಿ ಡೆಂಬಲೆ ಇವರಿಂದ ಭರತನಾಟ್ಯ, ರಾತ್ರಿ 9 ರಿಂದ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪುರಸ್ಕೃತ ಕಾಂಚನ ವೆಂಕಟಸುಬ್ರಹ್ಮಣ್ಯ ಸ್ಮಾರಕ ಪ್ರೌಢಶಾಲೆಯ ಮುಖ್ಯಗುರು ರಮೇಶ್ ಮಯ್ಯ, ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಕೀರ್ತನ ಎಚ್. ಉರಾಬೆ ಹಾಗೂ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ರಕ್ಷಾ ಡಿ. ಒರುಂಬೋಡಿ ಇವರಿಗೆ ಸನ್ಮಾನ ನಡೆಯಲಿದೆ. ರಾತ್ರಿ 9ಕ್ಕೆ ಅನ್ನಸಂತರ್ಪಣೆ, ರಾತ್ರಿ 10ಕ್ಕೆ ವರ್ಣರ ಪಂಜುರ್ಲಿ, ಚಕ್ರವರ್ತಿ ಕೊಡಮಣಿತ್ತಾಯ, ಗ್ರಾಮ ದೈವ ಶಿರಾಡಿ ದೈವಗಳ ನೇಮೋತ್ಸವ, ಫೆ.14ರಂದು ಅಪರಾಹ್ನ 2ಕ್ಕೆ ದೊಂಪದ ಬಲಿಯ ಮಾರಿ ಪೂಜೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮೊಕ್ತೇಸರರು ಹಾಗೂ ಅಧ್ಯಕ್ಷರು, ಟ್ರಸ್ಟಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here