ಮಾಣಿ ಜಂಕ್ಷನ್‌ನಲ್ಲಿ ಕಾರುಗಳ ಮಧ್ಯೆ ಅಪಘಾತ : ಚಾಲಕರಿಬ್ಬರು ಪವಾಡಸದೃಶ್ಯ ಪಾರು

0

ವಿಟ್ಲ: ಎರಡು ಕಾರುಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾಣಿ ಜಂಕ್ಷನ್‌ನಲ್ಲಿ ನಡೆದಿದೆ.


ಅದೃಷ್ಟವಶಾತ್ ಎರಡೂ ವಾಹನಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಫ್ಲೈ ಓವರ್ ಕೆಳಭಾಗದಿಂದ ಪುತ್ತೂರು ಕಡೆಗೆ ಸಾಗುತ್ತಿದ್ದ ಕಾರಿಗೆ, ಉಪ್ಪಿನಂಗಡಿ ಕಡೆಯಿಂದ ಸರ್ವಿಸ್ ರಸ್ತೆಯ ಮೂಲಕ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳ ಮುಂಭಾಗ ಜಖಂಗೊಂಡಿದೆ. ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

LEAVE A REPLY

Please enter your comment!
Please enter your name here