60 ಅಡಿ ಆಳದ ಬಾವಿಗಿಳಿದು ಬೆಕ್ಕಿನ ಮರಿಯ ರಕ್ಷಣೆ -ಪುತ್ತೂರು ಅಗ್ನಿಶಾಮಕ ದಳದ ಕಾರ್ಯಾಚರಣೆ

0

ಪುತ್ತೂರು: ಬಡಗನ್ನೂರು ಗ್ರಾಮದ ಮುಡಿಪಿನಡ್ಕದಲ್ಲಿ 60 ಅಡಿ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿಯನ್ನು ಪುತ್ತೂರು ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದ ರಕ್ಷಣೆ ಮಾಡಿದ ಘಟನೆ ಫೆ.17ರಂದು ನಡೆದಿದೆ.


ಬಡಗನ್ನೂರು ಗ್ರಾಮದ ಮುಡಿಪಿನಡ್ಕದ ಮೈಮುನಾ ಎಂಬವರ ಮನೆಯಂಗಳದಲ್ಲಿರುವ ಬಾವಿಗೆ ಮನೆಯ ಸಾಕು ಬೆಕ್ಕೊಂದು ಬಿದ್ದಿತ್ತು. ಈ ಕುರಿತು ಅವರು ಅಗ್ನಿಶಾಮಕದಳಕ್ಕೆ ಕರೆ ಮಾಡಿದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ಮಾಡಿ ಬಾವಿಗಿಳಿದು ಬೆಕ್ಕನ್ನು ರಕ್ಷಣೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here