







ನಿಡ್ಪಳ್ಳಿ: ಬೆಟ್ಟಂಪಾಡಿ ಗ್ರಾಮ ಪಂಚಾಯತ್ ನ 2021-26ರ ಅವದಿಯ ಆಡಳಿತ ಮಂಡಳಿಯ ಅಧಿಕಾರವಧಿ ಫೆ.16ಕ್ಕೆ ಮುಗಿದ ಕಾರಣ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.



ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಇರ್ದೆ ಬೆಟ್ಟಂಪಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ. ರಾಮಯ್ಯ ರೈ, ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷ ಪ್ರವೀಣ್ ರೈ ಪಂಜೊಟ್ಟು, ಬೆಟ್ಟಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಕರುಣಾಕರ ಶೆಟ್ಟಿ ಕೊಮ್ಮಂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.ಪಂಚಾಯತ್ ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ, ಉಪಾಧ್ಯಕ್ಷ ಮಹೇಶ್ ಕೊಮ್ಮಂಡ, ಪಿಡಿಒ ಸೌಮ್ಯ ಎಂ.ಎಸ್ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.












