







ಪುತ್ತೂರು: ಯತೀಶ್ ಕುಮಾರ್ ರೈ ಮುಳ್ಳೇರಿಯಾರವರು “ಕರ್ನಾಟಕ ಮತ್ತು ಕೇರಳದ ಕನ್ನಡ ಭಾಷಾ ಪಠ್ಯಪುಸ್ತಕಗಳ ತೌಲನಿಕ ಅಧ್ಯಯನ(ಪ್ರೌಢಶಾಲಾ ಪಠ್ಯಪುಸ್ತಕಗಳನ್ನು ಅನುಲಕ್ಷಿಸಿ)” ಎಂಬ ವಿಷಯದ ಕುರಿತಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಪುರಸ್ಕರಿಸಿದೆ. ಇವರು ಉಜಿರೆ ಡಾ. ಹಾಮಾನಾ ಸಂಶೋಧನಾ ಕೇಂದ್ರದ ವಿದ್ಯಾರ್ಥಿಯಾಗಿದ್ದು, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಡಾ| ಸುಬ್ರಹ್ಮಣ್ಯ ಕೆ.ರವರ ಮಾರ್ಗದರ್ಶನದಲ್ಲಿ ಅಧ್ಯಯನ ಕೈಗೊಂಡಿದ್ದರು.












