







ನಿಡ್ಪಳ್ಳಿ: 2021-2026ರ ಅವಧಿಯಲ್ಲಿ ಅಧಿಕಾರದಲ್ಲಿದ್ದ ಗ್ರಾಮ ಪಂಚಾಯತ್ ನ ಆಡಳಿತ ಮಂಡಳಿಯ ಅಧಿಕಾರವಧಿ ಫೆ.16ಕ್ಕೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಸರಕಾರ ಆಡಳಿತಾಧಿಕಾರಿಗಳನ್ನು ನೇಮಿಸಿದೆ.


ನಿಡ್ಪಳ್ಳಿ ಗ್ರಾಮ ಪಂಚಾಯತ್ ಗೆ ಆಡಳಿತಾಧಿಕಾರಿಯಾಗಿ ನೇಮಿಸಿದ ಪಿ.ಎಂ.ಜಿ.ಎಸ್.ವೈ ಪುತ್ತೂರು ಇದರ ಸಹಾಯಕ ಕಾರ್ಯವಾಹಕ ಚೇತನ್ ಕುಮಾರ್ ಇವರು ಫೆ.18ರಂದು ಗ್ರಾಮ ಪಂಚಾಯತ್ ಗೆ ಆಗಮಿಸಿ ಪ್ರಭಾರ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು. ಪಿಡಿಒ ಜಯಪ್ರಕಾಶ್ ರವರು ಅವರನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು.













